ಯೆಶಾಯ 63:2

ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?

ಸಂದರ್ಭದೊಂದಿಗೆ ಓದಿ · ಯೆಶಾಯ 63

1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.

2ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?

3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.

4ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.

ಯೆಶಾಯ 63 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी