ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
16ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
17ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
19ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
20ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ