೧ ಅರಸುಗಳು 18:17

ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 18

15ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.

16ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು.

17ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.

18ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.

19ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್‌ ಬೆಟ್ಟಕ್ಕೆ ಕೂಡಿಸು ಅಂದನು.

೧ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी