ಯೆರೆಮಿಯ 50:14

ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 50

12ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.

13ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.

14ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.

15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.

16ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.

ಯೆರೆಮಿಯ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी