ಲೂಕನು 1:16

ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.

ಸಂದರ್ಭದೊಂದಿಗೆ ಓದಿ · ಲೂಕನು 1

14ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.

15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.

16ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.

17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.

18ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.

ಲೂಕನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी