ಪ್ರಲಾಪಗಳು 2:5

ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 2

3ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.

4ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್‌ ಮಗಳ ಗುಡಾರದಲ್ಲಿ ಸುರಿದಿದ್ದಾನೆ.

5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.

6ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.

7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.

ಪ್ರಲಾಪಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी