ಇಬ್ರಿಯರಿಗೆ 11:27

ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 11

25ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.

26ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.

27ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.

28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.

29ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.

ಇಬ್ರಿಯರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी