ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ.
11ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು.
12ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
13ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ.
14ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
15ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ