ಪ್ರಕಟನೆ 21:18

ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 21

16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.

17ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.

18ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ.

19ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.

20ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ.

ಪ್ರಕಟನೆ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी