ದಾನಿಯೇಲನು 11:11

ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 11

9ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.

10ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.

11ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.

12ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.

13ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.

ದಾನಿಯೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी