ಜೆಕರ್ಯ 8:21

ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.

ಸಂದರ್ಭದೊಂದಿಗೆ ಓದಿ · ಜೆಕರ್ಯ 8

19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.

20ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

21ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.

22ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.

23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.

ಜೆಕರ್ಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी