ಕೀರ್ತನೆಗಳು 10:7

ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 10

5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.

6ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.

7ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.

8ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;

9ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.

ಕೀರ್ತನೆಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी