ಯೆರೆಮಿಯ 18:12

ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 18

10ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.

11ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.

12ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.

13ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.

14ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?

ಯೆರೆಮಿಯ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी