ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
3ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
4ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
5ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
6ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
7ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ