೨ ಥೆಸಲೊನೀಕದವರಿಗೆ 2:5

ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?

ಸಂದರ್ಭದೊಂದಿಗೆ ಓದಿ · ೨ ಥೆಸಲೊನೀಕದವರಿಗೆ 2

3ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;

4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.

5ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?

6ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.

7ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;

೨ ಥೆಸಲೊನೀಕದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी