ಯೆಹೆಜ್ಕೇಲನು 31:16

ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 31

14ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.

15ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.

16ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.

17ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;

18ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी