೧ ಸಮುವೇಲನು 25:29

ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 25

27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.

28ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.

29ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.

30ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ;

31ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು.

೧ ಸಮುವೇಲನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी