ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.
24ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;
25ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ಓ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು.
26ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.
27ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ