ಧರ್ಮೋಪದೇಶಕಾಂಡ 28:52

ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 28

50ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.

51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.

52ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.

53ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.

54ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.

ಧರ್ಮೋಪದೇಶಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी