ವಿಮೋಚನಕಾಂಡ 14:3

ಫರೋಹನು ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 14

1ಕರ್ತನು ಮಾತನಾಡಿ ಮೋಶೆಗೆ--

2ಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.

3ಫರೋಹನು ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.

4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.

5ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.

ವಿಮೋಚನಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी