ಪ್ರಕಟನೆ 3:15

ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 3

13ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

14ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್‌ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,

15ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.

16ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.

17ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.

ಪ್ರಕಟನೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी