ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
22ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?
23ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
24ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
25ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ