ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
3ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
4ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
5ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
6ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
7ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ