ಯೆಶಾಯ 47:12

ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.

ಸಂದರ್ಭದೊಂದಿಗೆ ಓದಿ · ಯೆಶಾಯ 47

10ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.

11ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.

12ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.

13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.

14ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.

ಯೆಶಾಯ 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी