ನೆಹೆಮಿಯ 9:20

ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.

ಸಂದರ್ಭದೊಂದಿಗೆ ಓದಿ · ನೆಹೆಮಿಯ 9

18ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ

19ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.

20ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.

21ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.

22ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.

ನೆಹೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी