ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
7ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
9ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
10ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
11ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ