ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
12ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು.
13ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
14ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
15ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
16ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ