೧ ಸಮುವೇಲನು 12:14

ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 12

12ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.

13ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ.

14ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.

15ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.

16ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.

೧ ಸಮುವೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी