ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.
7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
9ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.
10ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ