ನ್ಯಾಯಸ್ಥಾಪಕರು 14:10

ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 14

8ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.

9ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.

10ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.

11ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.

12ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.

ನ್ಯಾಯಸ್ಥಾಪಕರು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी