ಯೆಶಾಯ 45:18

ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 45

16ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.

17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.

18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.

19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.

20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.

ಯೆಶಾಯ 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी