ಯೆಹೆಜ್ಕೇಲನು 4:5

ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 4

3ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್‌ ಮನೆತನದ ಗುರುತಾಗಿರುವದು.

4ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್‌ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.

5ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.

6ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.

7ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.

ಯೆಹೆಜ್ಕೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी