೨ ಪೂರ್ವಕಾಲವೃತ್ತಾಂತ 7:9

ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 7

7ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.

8ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.

9ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;

10ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.

11ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.

೨ ಪೂರ್ವಕಾಲವೃತ್ತಾಂತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी