ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
33ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
34ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
35ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
36ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
37ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ