ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.
14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
15ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.
16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.
17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ