ಯೆರೆಮಿಯ 23:31

ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 23

29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?

30ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.

31ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.

32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.

33ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.

ಯೆರೆಮಿಯ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी