೧ ಯೋಹಾನನು 3:13

ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 3

11ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.

12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.

13ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.

14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

15ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.

೧ ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी