ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.
17ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
18ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
19ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.
20ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ
21ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ