ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು.
24ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
25ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.
26ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು.
27ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು.
28ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ