ವಿಮೋಚನಕಾಂಡ 23:14

ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 23

12ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.

13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.

14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.

15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)

16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.

ವಿಮೋಚನಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी