ನ್ಯಾಯಸ್ಥಾಪಕರು 9:2

ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 9

1ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--

2ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.

3ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.

4ಅವರು ಬಾಳ್‌ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.

ನ್ಯಾಯಸ್ಥಾಪಕರು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी