ಆದಿಕಾಂಡ 48:14

ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 48

12ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.

13ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.

14ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.

15ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,

16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್‌ ಇಸಾಕ್‌ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.

ಆದಿಕಾಂಡ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी