ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
11ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
12ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
13ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ