ಧರ್ಮೋಪದೇಶಕಾಂಡ 4:12

ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 4

10ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು

11ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.

12ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.

13ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.

14ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.

ಧರ್ಮೋಪದೇಶಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी