ಪ್ರಕಟನೆ 19:3

ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 19

1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.

2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.

3ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.

4ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್‌. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.

5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.

ಪ್ರಕಟನೆ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी