ಯೋಹಾನನು 8:18

ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.

ಸಂದರ್ಭದೊಂದಿಗೆ ಓದಿ · ಯೋಹಾನನು 8

16ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.

17ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.

18ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.

19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.

20ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी