ಆದಿಕಾಂಡ 37:11

ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 37

9ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.

10ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.

11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.

12ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.

13ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.

ಆದಿಕಾಂಡ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी