ಯೆಹೆಜ್ಕೇಲನು 22:12

ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 22

10ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;

11ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.

12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.

13ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.

14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.

ಯೆಹೆಜ್ಕೇಲನು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी