ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.
11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
13ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.
14ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ