ಯಾಜಕಕಾಂಡ 26:35

ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 26

33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.

34ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.

35ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.

36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.

37ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.

ಯಾಜಕಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी